ಬೆಂಗಳೂರು: ರಾಜ್ಯದಲ್ಲಿ ನೈಋತ್ಯ ಮುಂಗಾರು ಶುರುವಾಗಿದ್ದು, ರಾಜ್ಯದ ಕರಾವಳಿ, ಉತ್ತರ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 17ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಧಾರಾಕಾರ ಮಳೆಯಾಗುವ ಹಿನ್ನೆಲೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಯಾದಗಿರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಹಾಗೂ ಬಾಗಲಕೋಟೆಯಲ್ಲಿ ಯೆಲ್ಲೊ ಅಲರ್ಟ್ ಜಾರಿ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ನೈಋತ್ಯ ಮುಂಗಾರು ಶುರುವಾಗಿದ್ದು, ಇಂದು ರಾಜ್ಯಾದ್ಯಂತ ಮಳೆಯಾಗುವ ಸಾಧ್ಯತೆ ಇದ್ದು, ಹಲವು ಕಡೆ ಮೋಡ ಕವಿದ ವಾತಾವರಣ ಇರಲಿದೆ. ಇನ್ನು ಮದ್ಯಾಹ್ನದ ವೇಳೆಗೆ ಕೊಂಚ ಪ್ರಮಾಣದಲ್ಲಿ ಬಿಸಿಲು ಇರಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.