ಬೆಂಗಳೂರು: ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ವಿದ್ಯಾರ್ಥಿವೇತನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಹೌದು, ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ, ತಾಂತ್ರಿಕ ಶಿಕ್ಷಣ ಇಲಾಖೆಗೆ ಅರ್ಜಿ ಸಲ್ಲಿಸಲು ಜುಲೈ 1 ಕಡೆ ದಿನ ಆಗಿದ್ದು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಲು ಜೂನ್ 20 ಕೊನೆ ದಿನ ಆಗಿದೆ.
ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ssp.postmatric.karnataka.gov.inಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.