ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದೂ ಕೂಡ ಮಳೆ ಮುಂದುವರೆಯುವ ಸಾಧ್ಯತೆ ಹೆಚ್ಚಾಗಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರಾಜ್ಯದ ಕರಾವಳಿ, ಮಲೆನಾಡು, ದಕ್ಷಿಣ ಒಳನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, ಕಳೆದ 10 ದಿನಗಳಿಂದ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದೂ ಸಹ ಮಳೆಯಾಗುವ ಸಾಧ್ಯತೆ ಇರುವುದರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ (ಯೆಲ್ಲೋ) ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹವಾಮಾನ ವರದಿ:
ಬೆಂಗಳೂರಿನಲ್ಲಿ ಗರಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಯಾದಗಿರಿ, ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ಉಷ್ಣಾಂಶ 34 ಡಿಗ್ರಿ ಸೆಲ್ಸಿಯಸ್, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.