ಮೈಸೂರು: ಕೊರೋನಾ ಹರಡುವುದನ್ನು ತಡೆಗಟ್ಟಲು ಹೇರಲಾಗಿದ್ದ ನಿರ್ಬಂಧಗಳನ್ನು ರಾಜ್ಯ ಸರ್ಕಾರ ಸಡಿಲಗೊಳಿಸಿರುವ ಹಿನ್ನೆಲೆ ಮೈಸೂರು ಜಿಲ್ಲೆಯಲ್ಲಿ ಸೋಮವಾರದಿಂದ ಬಸ್ ಸೇವೆ ಪುನಾರಂಭಿಸಲಾಗುತ್ತಿದೆ ಎಂದು ರಾಜ್ಯ ರಸ್ತೆ ಸಾರಿಗೆ ನಿಗಮ ಶನಿವಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.
ಹೌದು, ಮೈಸೂರು ಜಿಲ್ಲಾ ವ್ಯಾಪ್ತಿಯಲ್ಲಿ ಜೂನ್ 28ರ ಬೆಳಿಗ್ಗೆ 6 ಗಂಟೆಯಿಂದ ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಬಸ್ ಕಾರ್ಯಾಚರಣೆ ಪುನಾರಂಭಿಸಲಾಗುತ್ತಿದ್ದು, ಪ್ರಯಾಣಿಕರು ಕೊರೋನಾ ಮಾರ್ಗಸೂಚಿಗಳನ್ನು ಪಾಲಿಸಬೇಕೆಂದು ರಾಜ್ಯ ರಸ್ತೆ ಸಾರಿಗೆ ನಿಗಮ ತಿಳಿಸಲಾಗಿದೆ.