ಬೆಂಗಳೂರು: ಟೋಕಿಯೊ ಒಲಿಂಪಿಕ್ಗೆ ಆಯ್ಕೆಯಾಗುವವರಿಗೆ ತಲಾ 10 ಲಕ್ಷ ರೂ ಪ್ರೋತ್ಸಾಹಧನ ಘೋಷಣೆ ಮಾಡಲಾಗಿದೆ ಎಂದು ಕ್ರೀಡಾ ಸಚಿವ ನಾರಾಯಣಗೌಡ ಅವರು ತಿಳಿಸಿದ್ದಾರೆ.
ಹೌದು, ಒಲಿಂಪಿಕ್ ನಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ನೀಡುವ ಬಗ್ಗೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿತ್ತು. ಅದರಂತೆ ಈಗ ಆದೇಶ ಹೊರಡಿಸಲಾಗಿದೆ. ರಾಜ್ಯದ ನಾಲ್ವರು ಕ್ರೀಡಾಪಟುಗಳು ಟೋಕಿಯೊ ಒಲಿಂಪಿಕ್ಸ್ಗೆ ಸಂಭವನೀಯರ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಇನ್ನು, ಜುಲೈ 23ರಿಂದ ಒಲಿಂಪಿಕ್ ಕೂಟ ಆರಂಭವಾಗಲಿದೆ.