ಬೆಂಗಳೂರು: ಈ ಬಾರಿ 8,76,581 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಹಾಜರಾಗಲಿದ್ದು, ಕೇವಲ 2 ದಿನಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಮೊದಲ ದಿನ ಗಣಿತ, ವಿಜ್ಞಾನ, ಹಾಗೂ ಸಮಾಜ ವಿಜ್ಞಾನ ಪರೀಕ್ಷೆಗಳು ನಡೆಯಲಿವೆ. ಇನ್ನೊಂದು ದಿನ ಭಾಷಾ ವಿಷಯಗಳ ಪರೀಕ್ಷೆಗಳು ನಡೆಯಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಅವರು ಕುಮಾರ್ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಸಚಿವ ಸುರೇಶ್ ಕುಮಾರ್ ಅವರು ಎಲ್ಲ ಪರೀಕ್ಷೆಗಳು ಬಹು ಆಯ್ಕೆಯ ಪ್ರಶ್ನೆ ಪತ್ರಿಕೆ ಮಾದರಿಯಲ್ಲಿ ನಡೆಯಲಿದ್ದು, ಬೆಳಿಗ್ಗೆ 10-30 ರಿಂದ ಮದ್ಯಾಹ್ನ 1-30ರವರೆಗೆ ಪರೀಕ್ಷೆ ನಡೆಯಲಿವೆ. ಜುಲೈ 19 ರಂದು ಸೋಮವಾರ ಕೋರ್ ವಿಷಯ ಹಾಗೂ ಜುಲೈ 22ಕ್ಕೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಪ್ರವೇಶ ಪತ್ರಗಳನ್ನು ನಾಳೆಯಿಂದ ಮುಖ್ಯೋಪಾಧ್ಯಾಯರಿಂದ ಪಡೆಯಬಹುದಾಗಿದೆ ಎಂದು ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
SSLC ವಿದ್ಯಾರ್ಥಿಗಳಿಗೆ ಮಾಸ್ಕ್ ಉಚಿತ: ಸುರೇಶ್ ಕುಮಾರ್
ಈ ಬಾರಿಯ SSLC ಪರೀಕ್ಷೆ ಸರಳವಾಗಿರಲಿದ್ದು, ವಿದ್ಯಾರ್ಥಿಗಳಿಗೆ ಉಚಿತವಾಗಿ ಮಾಸ್ಕ್ ವಿತರಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಇಂದು ತಿಳಿಸಿದ್ದು, ಪರೀಕ್ಷೆ ನಡೆಯುವ ದಿನ ಪರೀಕ್ಷಾ ಕೇಂದ್ರದ ಸುತ್ತ 200 ಕಿ.ಮೀ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಇರಲಿದೆ.
ಇನ್ನು, ಮೈಗ್ರೇಟ್ ಆಗಿರುವ ಮಕ್ಕಳಿಗೆ ಮನೆಯ ಬಳಿಯೇ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದೇವೆ. ಕೊರೋನಾಗೆ ತುತ್ತಾಗಿರುವ ವಿದ್ಯಾರ್ಥಿಗಳಿಗೆ ಬಳಿಕ ಪರೀಕ್ಷೆಗೆ ಅವಕಾಶ ಕೊಟ್ಟು ಫ್ರೆಶರ್ಸ್ ಎಂದೇ ಪರಿಗಣಿಸುತ್ತೇವೆ ಎಂದು ಸಚಿವರು ತಿಳಿಸಿದ್ದಾರೆ.