ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಜುಲೈ 2 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ, ರಾಜಧಾನಿ ಬೆಂಗಳೂರಿನಲ್ಲೂ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ರಾಜ್ಯದಲ್ಲಿ ಮುಂಗಾರು ಆರಂಭಗೊಂಡಿದ್ದು, ಜುಲೈ 2 ರವರೆಗೆ ನಾಲ್ಕು ದಿನ ದಕ್ಷಿಣ ಒಳನಾಡು ಮತ್ತು ಕರಾವಳಿಯ ಎಲ್ಲಾ ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಕೆಲವು ಕಡೆ ಮಾತ್ರ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ರಾಜ್ಯದ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸೋಮವಾರ ವ್ಯಾಪಕ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನು, 2 ದಿನ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ.