ಬೆಂಗಳೂರು: ರಾಜ್ಯದ ಪದವಿ ಕಾಲೇಜುಗಳಲ್ಲಿ ಖಾಲಿ ಇರುವ ಪ್ರಾಂಶುಪಾಲರು ಮತ್ತು ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಹೌದು, ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರಿಗೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು ಪತ್ರ ಬರೆದಿದ್ದು, ನೇಮಕಾತಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. ಪತ್ರದ ಮಾಹಿತಿ ಪ್ರಕಾರ, 310 ಪ್ರಾಂಶುಪಾಲರು ಹಾಗೂ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ಭರ್ತಿ ಆಗಲಿದ್ದು, ಶೀಘ್ರ ಅಧಿಸೂಚನೆ ಹೊರಬೀಳುವ ಸಾಧ್ಯತೆಯಿದೆ ಎನ್ನಲಾಗಿದೆ.
ಇನ್ನು, ಸರ್ಕಾರದ ಈ ಅಧಿಸೂಚನೆಯಿಂದ ಪ್ರಾಂಶುಪಾಲರು, ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಸಿಹಿಸುದ್ದಿಯನ್ನು ನೀಡಿದಂತಾಗಿದೆ.