ಆತಿಥೇಯ ಇಂಗ್ಲೆಂಡ್ ವಿರುದ್ಧ 2-1ಅಂತರದ ಸರಣಿ ಸೋಲಿನ ನಡುವೆಯೂ ಭಾರತದ ಮಹಿಳಾ ತಂಡದ ನಾಯಕಿ ಮಿಥಾಲಿ ರಾಜ್ ಹೊಸದೊಂದು ದಾಖಲೆ ಬರೆದಿದ್ದಾರೆ.
ಹೌದು, ಅಂತರರಾಷ್ಟ್ರೀಯ ಮಹಿಳಾ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಗೆ ಮಿಥಾಲಿ ಪಾತ್ರರಾಗಿದ್ದು, ಇಂಗ್ಲೆಂಡ್ ವಿರುದ್ಧ ನಡೆದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಷಾರ್ಲೆಟ್ ಎಡ್ವರ್ಡ್ಸ್ (10,273 ರನ್) ದಾಖಲೆ ಮುರಿದಿರುವ ಮಿಥಾಲಿ, ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಗರಿಷ್ಠ ರನ್ ಗಳಿಸಿದ ವಿಶ್ವದಾಖಲೆ ಬರೆದಿದ್ದಾರೆ.
ಇನ್ನು, ನಿನ್ನೆ ನಡೆದ ಇಂಗ್ಲೆಂಡ್ ವಿರುದ್ದದ ಕೊನೆಯ ಪಂದ್ಯದಲ್ಲಿ ನಾಯಕಿ ಮಿಥಾಲಿ ರಾಜ್ ಅಜೇಯ 75 ಗಳಿಸಿ ತಂಡದ ಗೆಲುವಿಗೆ ಕಾರಣರಾದರು.