ನವದೆಹಲಿ: ಕೇಂದ್ರ ಸಚಿವ ಸಂಪುಟ ವಿಸ್ತರಣೆ ಇಂದು ಸಂಜೆ ನಡೆಯುತ್ತಿರುವ ಹಿನ್ನೆಲೆ, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಮತ್ತು ಕಾರ್ಮಿಕ ಸಚಿವ ಸಂತೋಷ್ ಗಂಗ್ವಾರ್ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಹೌದು ಇಂದು ಸಂಜೆ 43 ಸಂಸದರು, ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ರಾಜ್ಯದಿಂದ ಸಂಸದೆ ಶೋಭಾ ಕರಂದ್ಲಾಜೆ, ಸಂಸದ ಎ.ನಾರಾಯಣಸ್ವಾಮಿ ಅವರು ಮೋದಿ ಕ್ಯಾಬಿನೆಟ್ ಸೇರುವ ಸಾಧ್ಯತೆಯಿದೆ ಎನ್ನಲಾಗಿದ್ದು, ಹಾಲಿ ಸಚಿವ ಡಿ.ವಿ.ಸದಾನಂದಗೌಡ ಅವರಿಗೆ ಕೊಕ್ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ.