ಅರಸೀಕೆರೆ: ಹರಪನಹಳ್ಳಿ ತಾಲೂಕಿನ ಅರಸೀಕೆರೆಯಲ್ಲಿ 75ನೇ ಸ್ವತಂತ್ರ ಅಮೃತ ಮಹೋತ್ಸವ ಅಂಗವಾಗಿ ಇಂದು ಶ್ರೀ ಯೋಗ ನರಸಿಂಹ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ವತಿಯಿಂದ ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಶ್ರೀ ಯೋಗ ನರಸಿಂಹ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ಬ್ಯಾಂಕ್ ಮುಂದೆ ಆಚರಿಸಲಾಗುವುದು ಎಂದು ಅಧ್ಯಕ್ಷರು ತಿಳಿಸಿದ್ದಾರೆ.
ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ ಶ್ರೀ ಯೋಗ ನರಸಿಂಹ ಸೌಹಾರ್ದ ಪತ್ತಿನ ಸಹಕಾರಿ ನಿಯಮಿತ ವತಿಯಿಂದ ಕ್ರೀಡಾ ಕಾರ್ಯಕ್ರಮಗಳು ನಡೆಯಲಿದ್ದು, ಬೆಳಗ್ಗೆ ಸಮಯ 10.45 ರಿಂದ ರಂಗೋಲಿ,ಚಿತ್ರಕಲೆ,ಪ್ರಬಂಧ ಸ್ಪರ್ಧೆ, ಹಾಗೂ ಇತರೆ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದ್ದು, ಕಾರ್ಯಕ್ರಮಕ್ಕೆ ವಿಧ್ಯಾರ್ಥಿಗಳು ಭಾಗವಹಿಸಬಹುದು ಎಂದು ತಿಳಿಸಲಾಗಿದೆ.
ಇನ್ನು, ಈ ಕಾರ್ಯಕ್ರಮಕ್ಕೆ ಬ್ಯಾಂಕ್ ಸಿಬ್ಬಂದಿ ವರ್ಗದವರು, ಶಾಲಾ ಮಕ್ಕಳು, ಶಿಕ್ಷಕ ವರ್ಗದವರು ಹಾಗೂ ಸುತ್ತಮುತ್ತಲಿನ ಗ್ರಾಮಸ್ಥರು ಆಗಮಿಸಲಿದ್ದಾರೆ.