ಚಿತ್ರದುರ್ಗ: ಲೈಂಗಿಕ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಮಠದ ಸ್ವಾಮೀಜಿ ಡಾ.ಶಿವಮೂರ್ತಿ ಶ್ರೀಗಳ ಮೇಲೆ ಪೋಕ್ಸೋ ಪ್ರಕರಣದಲ್ಲಿ ಕೊನೆಗೂ ಅರೆಸ್ಟ್ ಮಾಡಲಾಗಿದ್ದು, ಎದೆ ನೋವಿನ ಕಾರಣದಿಂದ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುರುಘಾ ಮಠದ ಶ್ರೀಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಶಿಫ್ಟ್ ಮಾಡಲಾಗುವುದು ಎಂದು ಡಾ. ಬಸವರಾಜ್ ಹೇಳಿದ್ದಾರೆ.
ಪೋಕ್ಸೋ ಕಾಯ್ದೆಯಡಿ ಅರೆಸ್ಟ್ ಆಗಿ ನ್ಯಾಯಾಂಗ ಬಂಧನದಲ್ಲಿರುವ ಡಾ. ಶಿವಮೂರ್ತಿ ಶ್ರೀಗಳನ್ನು 12 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮುರುಘಾ ಶ್ರೀಗಳನ್ನು ಇಂದು ಬೆಳಗ್ಗೆ ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಶ್ರೀಗಳ ಆರೋಗ್ಯ ತಪಾಸಣೆ ನಡೆಸಲಾಗಿದ್ದು, ಮುರುಘಾ ಶರಣರ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಸತತ 5 ಗಂಟೆಗಳ ಚಿಕಿತ್ಸೆ ಬಳಿಕವೂ ಎದೆನೋವು ಕಡಿಮೆ ಆಗಿಲ್ಲ ಎಂದು ವೈದ್ಯರು ಹೇಳಿದ್ದಾರೆ.