ಖ್ಯಾತ ಹಾಸ್ಯನಟ ರಾಜು ಶ್ರೀವಾಸ್ತವ ಅವರು 58 ನೇ ವಯಸ್ಸಿನಲ್ಲಿ ದೆಹಲಿಯಲ್ಲಿಂದು ನಿಧನರಾಗಿದ್ದಾರೆ ಎಂಬ ಮಾಹಿತಿ ದೊರೆತಿದೆ.
ಹೌದು, ಆಗಸ್ಟ್ 10ರಂದು ಜಿಮ್ನಲ್ಲಿ ವರ್ಕ್ಔಟ್ ಮಾಡುವಾಗ ಎದೆ ನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದ ಹಾಸ್ಯನಟ ರಾಜು ಶ್ರೀವಾಸ್ತವ (58) ಅವರನ್ನು ಏಮ್ಸ್ ಗೆ ದಾಖಲಿಸಲಾಗಿತ್ತು. ಅವತ್ತಿನಿಂದ ಅವರು ಆಸ್ಪತ್ರೆಯಲ್ಲೆ ಇದ್ದರು. ಚಿಕಿತ್ಸೆ ಫಲಕಾರಿಯಾಗದೆ ಹಾಸ್ಯನಟ ರಾಜು ಶ್ರೀವಾಸ್ತವ ನಿಧನರಾಗಿದ್ದಾರೆ.
ಹಾಸ್ಯನಟ ರಾಜು ಶ್ರೀವಾಸ್ತವ ‘ಗ್ರೇಟ್ ಇಂಡಿಯನ್ ಲಾಫ್ಟರ್ ಚಾಲೆಂಜ್’ ಎಂಬ ಹಾಸ್ಯ ಕಾರ್ಯಕ್ರಮದ ಮೂಲಕ ಅವರು ಮನೆಮಾತಾಗಿದ್ದರು. ‘ಮೈನೆ ಪ್ಯಾರ್ ಕಿಯಾ’, ‘ಬಾಜಿಗರ್’, ‘ಬಾಂಬೆ ಟು ಗೋವಾ’ ಮೊದಲಾದ ಸಿನಿಮಾಗಳಲ್ಲಿ ಅವರು ನಟಿಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ