ಬೆಂಗಳೂರು: ರಾಜ್ಯದ ಪೌರ ಕಾರ್ಮಿಕರಿಗೆ ರಾಜ್ಯ ಸರ್ಕಾರವು ಭರ್ಜರಿ ಸಿಹಿಸುದ್ದಿ ನೀಡದ್ದು, 43 ಸಾವಿರ ಪೌರ ಕಾರ್ಮಿಕರನ್ನು ಖಾಯಂ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ನೀಡಿರುವ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ತಿಳಿಸಿದ್ದಾರೆ. ಸಿಎಂ ಬೊಮ್ಮಾಯಿ ನಿರ್ಧಾರಕ್ಕೆ ಪೌರ ಕಾರ್ಮಿಕರ ಸಂಘ ಸಂತಸ ವ್ಯಕ್ತಪಡಿಸಿದೆ.
“ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ” : ಮುಖ್ಯಮಂತ್ರಿ @BSBommai
— CM of Karnataka (@CMofKarnataka) September 21, 2022