ರಾಜ್ಯದ ನಿರುದ್ಯೋಗಿ ಯುವಕರಿಗೆ ಸಾರಿಗೆ ಇಲಾಖೆಯಿಂದ ಶುಭ ಸುದ್ದಿ ದೊರೆತಿದ್ದು, ರಾಜ್ಯ ಸಾರಿಗೆ ಇಲಾಖೆಯಲ್ಲಿ ಖಾಲಿ ಇರುವ 2,814 ಚಾಲಕರ ಹುದ್ದೆಗಳನ್ನು ಶೀಘ್ರದಲ್ಲೇ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಕಲಾಪದಲ್ಲಿ ಮಾತನಾಡಿದ ಸಾರಿಗೆ ಸಚಿವ ಬಿ ಶ್ರೀರಾಮುಲು ಅವರು, ಸಾರಿಗೆ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ಎದುರಾಗಿರುವುದನ್ನು ಮನಗಂಡು, ಇಷ್ಟು ಹುದ್ದೆಗಳ ನೇಮಕಕ್ಕೆ 2019ರಲ್ಲೇ ಅಧಿಸೂಚನೆ ಹೊರಡಿಸಲಾಗಿತ್ತು. ಕೋವಿಡ್ ಕಾರಣದಿಂದ ಪ್ರಕ್ರಿಯೆ ನಡೆಯಲಿಲ್ಲ.
ಈಗ ನೇಮಕಾತಿ ಪ್ರಕ್ರಿಯೆ ಚುರುಕಾಗಿದೆ. ಶೀಘ್ರದಲ್ಲೇ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗುವುದು. ಹೆಚ್ಚುವರಿಯಾಗಿ ಚಾಲಕ ಕಂ ನಿರ್ವಾಹಕರನ್ನು ಸಹ ನೇಮಕ ಮಾಡಿಕೊಳ್ಳಲಾಗುತ್ತದೆ. ಎಲ್ಲೆಲ್ಲಿ ಅಗತ್ಯವಿದೆಯೋ ಅಂತಹ ಕಡೆ ನಿಯೋಜನೆ ಮಾಡಿಕೊಳ್ಳಲಾಗುವುದು ಸಚಿವ ಬಿ ಶ್ರೀರಾಮುಲು ತಿಳಿಸಿದ್ದಾರೆ.