ಕರ್ನಾಟಕ ಜಲ ಸಂಪನ್ಮೂಲ ಇಲಾಖೆಯು 155 ದ್ವಿತೀಯ ದರ್ಜೆ ಸಹಾಯಕ (ಎಸ್‌ಡಿಎ) ಹುದ್ದೆ ಭರ್ತಿ ಸಂಬಂಧ ಅರ್ಜಿ ಸಲ್ಲಿಕೆ ಲಿಂಕ್ ಬಿಡುಗಡೆ ಮಾಡಿದ್ದು, ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ https://waterresources.karnataka.gov.in/ಗೆ ಭೇಟಿ ನೀಡಿ, ಅ.25ರೊಳಗೆ ಅರ್ಜಿ ಸಲ್ಲಿಸಬಹುದು.
ಈ ಹುದ್ದೆಗೆ ಪಿಯುಸಿ ವಿದ್ಯಾರ್ಹತೆ ನಿಗದಿಪಡಿಸಲಾಗಿದ್ದು, ಕನಿಷ್ಠ 18 ರಿಂದ ಗರಿಷ್ಠ 40 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ. ಆಯ್ಕೆಯಾದವರಿಗೆ ಮಾಸಿಕ 21,400 – 42,000 ರೂ. ವೇತನ ದೊರೆಯುತ್ತದೆ.