ನವದೆಹಲಿ: ಕೋವಿಡ್ -19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭವಾದ ಉಚಿತ ಪಡಿತರ ಯೋಜನೆಯನ್ನು ಇನ್ನೂ 3 ತಿಂಗಳ ಕಾಲ ವಿಸ್ತರಿಸಿ ಕೇಂದ್ರ ಸರ್ಕಾರ ಆದೇಶಿಸಿದ್ದು, ಇದು ದೇಶದ ಬಡಜನಸಂಖ್ಯೆಗೆ ಹೆಚ್ಚಿನ ಪರಿಹಾರ ನೀಡಲಿದೆ.
ಹೌದು, ಇಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೂರು ತಿಂಗಳವರೆಗೆ ಈ ವರ್ಷದ ಅಂತ್ಯದವರೆಗೆ ವಿಸ್ತರಿಸಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದ್ದು, ಮುಂಬರುವ ಹಬ್ಬ ಹರಿದಿನಗಳನ್ನು ಗಮನದಲ್ಲಿಟ್ಟುಕೊಂಡು ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ಇನ್ನು, ಈ ಯೋಜನೆಯಡಿ 80 ಕೋಟಿ ಜನ ಇದರ ಉಪಯೋಗ ಪಡೆದುಕೊಳ್ಳಲಿದ್ದಾರೆ. ಕೇಂದ್ರ ಹಣಕಾಸು ಸಚಿವಾಲಯದ ಪ್ರಕಾರ, ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸುವುದರಿಂದ ರಾಷ್ಟ್ರೀಯ ಖಜಾನೆಗೆ ₹ 45,000 ಕೋಟಿ ಹೊರೆ ಬೀಳುವ ಸಾಧ್ಯತೆಯಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ