ಕುಮ್ಕಿ, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಸಾಗುವಳಿ ಮಾಡುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಇಂತಹ ಭೂಮಿಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಸಾಗುವಳಿ ಚೀಟಿ ನೀಡುವ ಸಂಬಂಧ ಕಾನೂನು ರೂಪಿಸುವಂತೆ ಸಚಿವ ಸಂಪುಟ ಉಪಸಮಿತಿ ಕಾನೂನು ಇಲಾಖೆಗೆ ಸೂಚಿಸಿದೆ.
ಹೌದು, ರಾಜ್ಯದಲ್ಲಿ ರೈತರು ಕುಮ್ಕಿ, ಬಾಣೆ, ಸೊಪ್ಪಿನ ಬೆಟ್ಟದಲ್ಲಿ ಲಕ್ಷಾಂತರ ಎಕರೆ ಭೂಮಿಯಲ್ಲಿ ಈ ರೀತಿ ಸಾಗುವಳಿ ಮಾಡಿಕೊಂಡು ಬರಲಾಗುತ್ತಿದೆ. ಇನ್ನು, ಬಗರ್ ಹುಕುಂ ಅರ್ಜಿ ಸಲ್ಲಿಸಿದವರಿಗೆ, ಅರ್ಜಿ ತಿರಸ್ಕೃತಗೊಂಡವರು ಮಾತ್ರ ಸಾಗುವಳಿ ಚೀಟಿ ಪಡೆಯಲು ಅರ್ಹರಾಗಿರುತ್ತಾರೆ.