ಪಿಂಚಣಿದಾರರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಿದ್ದು, ಪಿಂಚಣಿ ಮಂಜೂರಾತಿಗೆ ಹಲೋ ಕಂದಾಯ ಸಚಿವರೇ ಎಂಬ ಸಹಾಯವಾಣಿ ಆರಂಭಿಸಿದ್ದು, ಅರ್ಜಿ ಸಲ್ಲಿಸಿದ 72 ಗಂಟೆಯೊಳಗೆ ಅರ್ಹ ಫಲಾನುಭವಿಗಳಿಗೆ ಮನೆ ಬಾಗಿಲಿಗೆ ಪಿಂಚಣಿ ದೊರೆಯಲಿದೆ.
ಹೌದು, ಪಿಂಚಣಿ ಮಂಜೂರಾತಿಗೆ ನಾಗರಿಕರು ಶುಲ್ಕ ರಹಿತ ಸಂಖ್ಯೆ 155245ಗೆ ದೂರವಾಣಿ ಮೂಲಕ ಆಧಾರ್ ಸಂಖ್ಯೆ ಒದಗಿಸಿ ಪಿಂಚಣಿ ಸೌಲಭ್ಯ ಕೋರಿಕೆ ಸಲ್ಲಿಸಬಹುದು. ಕೋರಿಕೆ ಸಲ್ಲಿಸಿದ ಬಳಿಕ ಗ್ರಾಮ ಲೆಕ್ಕಾಧಿಕಾರಿಗಳು ಅರ್ಜಿದಾರರ ಮನೆ ಬಾಗಿಲಿಗೆ ಭೇಟಿ ನೀಡಿ ದಾಖಲೆ ಸಂಗ್ರಹ ಮಾಡುತ್ತಾರೆ.