86ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕೊನೆಗೂ ಮುಹೂರ್ತ ಫಿಕ್ಸ್ ಆಗಿದ್ದು, 2023ರ ಜನವರಿ 6ರಿಂದ 8ರವರೆಗೆ ಮೂರು ದಿನಗಳ ಕಾಲ ಸಮ್ಮೇಳನ ನಡೆಯಲಿದೆ.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆ ಬಳಿಕ ಸಿಎಂ ಬಸವರಾಜ್ ಬೊಮ್ಮಾಯಿ ಅವರ ಅನುಮೋದನೆ ಪಡೆದು ಕನ್ನಡ & ಸಂಸ್ಕೃತಿ ಸಚಿವ ವಿ.ಸುನೀಲ್‌ಕುಮಾರ್ ದಿನಾಂಕ ಘೋಷಣೆ ಮಾಡಿದ್ದಾರೆ. ಬಹಳ ಅದ್ದೂರಿಯಾಗಿ 86ನೇ ಸಾಹಿತ್ಯ ಸಮ್ಮೇಳನವನ್ನು ನಡೆಸುವುದಕ್ಕೆ ತೀರ್ಮಾನ ತೆಗೆದುಕೊಳ್ಳಲಾಗಿದ್ದು, 8 ರಿಂದ 10 ಲಕ್ಷ ಜನರು ಭಾಗವಹಿಸುವ ನಿರೀಕ್ಷೆ ಇದೆ ಎಂದು ತಿಳಿಸಿದ್ದಾರೆ.
ಹಾವೇರಿಯಲ್ಲಿ ಈ ಹಿಂದೆ ನ.11, 12 ಮತ್ತು 13 ರಂದು ಸಮ್ಮೇಳನ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ, ಸಮ್ಮೇಳನಕ್ಕೆ ಅಗತ್ಯವಾದ ಸಿದ್ದತೆ ಆಗದ ಕಾರಣ ಸಮ್ಮೇಳನವನ್ನು ಮುಂದೂಡಲಾಗಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ