ಕರ್ನಾಟಕದ ಹಿಜಾಬ್ ವಿವಾದ ಕುರಿತು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದೇ ಅಥವಾ ಧರಿಸಬಾರದೇ ಅನ್ನುವ ಬಗ್ಗೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಪೀಠಕ್ಕೆ ವರ್ಗಾಯಿಸಲಾಗಿದೆ.
ಹೌದು, ನ್ಯಾ.ಹೇಮಂತ್ ಗುಪ್ತಾ ಮತ್ತು ಸುಧಾಂಶು ಧುಲಿಯಾ ಅವರಿದ್ದ ದ್ವಿಸದಸ್ಯ ಪೀಠ ಈ ತೀರ್ಮಾನ ಕೈಗೊಂಡಿದ್ದು, ಹಿಜಾಬ್ ವಿಚಾರದಲ್ಲಿ ಇಬ್ಬರು ನ್ಯಾಯಮೂರ್ತಿಗಳಲ್ಲಿ ವಿಭಿನ್ನ ನಿಲುವು ಹೊಂದಿದ್ದು, ನ್ಯಾ.ಹೇಮಂತ್, ಗುಪ್ತಾ ಮುಸ್ಲಿಂ ವಿದ್ಯಾರ್ಥಿನಿಯರ ಮೇಲ್ಮನವಿ ಅರ್ಜಿಯನ್ನು ವಜಾ ಮಾಡಿದ್ದು, ನ್ಯಾ.ಸುಧಾಂಶು, ಹೈಕೋರ್ಟ್ ಆದೇಶವನ್ನು ವಜಾ ಮಾಡಿದ್ದಾರೆ.