ಕರ್ನಾಟಕದ ಹಿಜಾಬ್ ವಿವಾದ ಕುರಿತು ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಧರಿಸಬಹುದೇ ಅಥವಾ ಧರಿಸಬಾರದೇ ಅನ್ನುವ ಮಹತ್ವದ ತೀರ್ಪನ್ನು ಇಂದು ಸುಪ್ರೀಂಕೋರ್ಟ್ ಬೆಳಗ್ಗೆ 10:30ಕ್ಕೆ ತೀರ್ಪು ನೀಡುವ ಸಾಧ್ಯತೆ ಇದೆ.
ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ಅವರ ಪೀಠವೂ ಈ ಕುರಿತು ಸುದೀರ್ಘ ವಿಚಾರಣೆ ನಡೆಸಿತ್ತು. ಇಂದು ತೀರ್ಪು ಬರಬಹುದೆಂಬ ಹಿನ್ನಲೆಯಲ್ಲಿ ರಾಜ್ಯದಾದ್ಯಂತ ಹೈ ಅಲರ್ಟ್ಗೆ ಸೂಚಿಸಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಈ ಮುನ್ನಚ್ಚರಿಕಾ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ರಾಜ್ಯದ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅನುಮತಿ ಕೋರಿ ಹೈಕೋರ್ಟ್ ಆದೇಶ ಪ್ರಶ್ನಿಸಿ ವಿದ್ಯಾರ್ಥಿನಿಯರು ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಈ ಅರ್ಜಿಯ ಸುದೀರ್ಘ ವಿಚಾರಣೆ ನಡೆಸಿರುವ ನ್ಯಾಯಮೂರ್ತಿಗಳಾದ ಹೇಮಂತ್ ಗುಪ್ತಾ ಮತ್ತು ಸುಧಾಂಶು ಧೂಲಿಯಾ ನ್ಯಾಯಪೀಠವು ಇಂದು ತೀರ್ಪು ಪ್ರಕಟಿಸುವ ಸಾಧ್ಯತೆ ಇದೆ.