ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ಅಗತ್ಯವಿರುವ ಖರ್ಚುವೆಚ್ಚಗಳಿಗಾಗಿ ಮಕ್ಕಳ ಪೋಷಕರಿಂದ ದೇಣಿಗೆ ರೂಪದಲ್ಲಿ ಪ್ರತಿತಿಂಗಳು 100 ರೂ ಸಂಗ್ರಹಿಸುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
ಆದರೆ, ಈ ನಿಯಮ ಕಡ್ಡಾಯವಲ್ಲ. ಪೋಷಕರು ಸ್ವಇಚ್ಛೆಯಿಂದ ದಾನ, ದೇಣಿಗೆ ರೂಪದಲ್ಲಿ ಹಣವನ್ನು ನೀಡಬಹುದು ಎಂದೂ ಸ್ಪಷ್ಟಪಡಿಸಿದೆ.ಈ ಹಣವನ್ನು ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಖಾತೆಗೆ ಸಂದಾಯ ಮಾಡಿಕೊಂಡು, ನಂತರ ಶಾಲಾ ಅಭಿವೃದ್ಧಿಗಾಗಿ ಬಳಸಬಹುದು ಎಂದು ಸುತ್ತೋಲೆಯಲ್ಲಿ ತಿಳಿಸಿದೆ.
ವಿಶೇಷ ಸಂದರ್ಭಗಳಲ್ಲಿ ಒಂದಷ್ಟು ವಂತಿಗೆಯನ್ನು ಸರ್ಕಾರಿ ಶಾಲೆಗಳು ಪಡೆಯುತ್ತಿದ್ದವು. ಇನ್ನು ಮುಂದೆ ನಿತ್ಯದ ವೆಚ್ಚಗಳಿಗೂ ಮಕ್ಕಳ ಪೋಷಕರಿಂದ ಹಣ ಸಂಗ್ರಹಿಸಲಿದ್ದು, ಸಂಗ್ರಹಿಸಿದ ಹಣವನ್ನು ಎಸ್‌ಡಿಎಂಸಿ ಖಾತೆಗೆ ಜಮೆ ಮಾಡಬೇಕು ಎಂದು ತಿಳಿಸಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ