ಮುಂದಿನ ಡಿಸೆಂಬರ್‌ನಲ್ಲಿ CM ಬಸವರಾಜ್ ಬೊಮ್ಮಾಯಿ 2 ಮಹತ್ವದ ಯೋಜನೆಗಳನ್ನು ಜಾರಿ ಮಾಡುವುದಾಗಿ ಘೋಷಿಸಿದ್ದು, ಪ್ರತಿ ಗ್ರಾಮದಲ್ಲಿ 2 ಸ್ತ್ರೀ ಶಕ್ತಿ ಸಂಘಗಳಿಗೆ ಮತ್ತು ಸ್ವಾಮಿ ವಿವೇಕಾನಂದ ಯುವಶಕ್ತಿ ಯೋಜನೆ ಮೂಲಕ ತಲಾ 5 ಲಕ್ಷ ರುಪಾಯಿ ಸಾಲ ಸೌಲಭ್ಯ ಮತ್ತು ಅನುದಾನ ಕೊಡಲು ಸರ್ಕಾರ ನಿರ್ಧರಿಸಿದೆ.
ಇನ್ನು, ಇದರ ಜೊತೆಗೆ ತಲಾ 5 ಲಕ್ಷ ಯುವಕರಿಗೆ ಮತ್ತು ಮಹಿಳೆಯರಿಗೆ ಉದ್ಯೋಗ ಕೊಡಲು ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು CM ಬಸವರಾಜ್ ಬೊಮ್ಮಾಯಿ ಹೇಳಿದ್ದು, ಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಗಳನ್ನು ರೂಪಿಸಲಾಗಿದೆ.