ಕಳೆದ ನವಂಬರ್ 6ರಂದು ರಾಜ್ಯಾದ್ಯಂತ ನಡೆಸಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ(ಟಿಇಟಿ)ಯ ಫಲಿತಾಂಶವನ್ನು ಒಂದು ವಾರದ ಒಳಗೆ ಪ್ರಕಟಿಸಲಾಗುತ್ತದೆಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ತಿಳಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು, ಪರೀಕ್ಷೆಗೆ ಒಟ್ಟು 3,32,913 ಅಭ್ಯರ್ಥಿಗಳು ಹಾಜರಾಗಿದ್ದರು. ಈಗಾಗಲೇ ಕೀ ಉತ್ತರಗಳನ್ನು ಪ್ರಕಟಿಸಲಾಗಿದ್ದು, ಫಲಿತಾಂಶವನ್ನೂ ಬಿತ್ತರಿಸಲಾಗುತ್ತದೆ ಎಂದಿದ್ದಾರೆ. ಸದ್ಯ 13000ಕ್ಕೂ ಹೆಚ್ಚು ಶಿಕ್ಷಕರ ನೇಮಕ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಸ್ಥಳ ನಿಯೋಜನೆ ಮಾಡಬೇಕಿದೆ.