ದಾವಣಗೆರೆ; ಜ.11: ಈ ಬಾರಿಯ ಗಣರಾಜ್ಯೋತ್ಸವದಲ್ಲಿ ಪ್ಲಾಸ್ಟಿಕ್ ಧ್ವಜಗಳ ಮಾರಾಟ ಹಾಗೂ ಬಳಕೆ ನಿಷೇಧಿಸಲಾಗಿದೆ ಎಂದು ಪರಿಸರ ಅಧಿಕಾರಿಗಳು ತಿಳಿಸಿದ್ದಾರೆ
ಪ್ಲಾಸ್ಟಿಕ್ ತ್ಯಾಜ್ಯ ಮಣ್ಣಿನಲ್ಲಿ ಕೊಳೆಯದ ಕಾರಣ ಮಣ್ಣಿನ ಫಲವತ್ತತೆ ಮತ್ತು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇದೆ. ಪರಿಸರ ಸ್ನೇಹಿಯಾಗಿ ಆಚರಿಸಲು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಕೋರಲಾಗಿದೆ.
ಪ್ಲಾಸ್ಟಿಕ್ ಧ್ವಜಗಳನ್ನು ಮಾರಾಟ ಮಾಡುವಂತಹ ಅಂಗಡಿಗಳು ಕಂಡುಬಂದರೆ ಅಂತಹವರ ವಿರುದ್ಧ ಪ್ಲಾಸ್ಟಿಕ್ ಅಧಿನಿಯಮ-2016 ಹಾಗೂ ಪರಿಸರ ಸಂರಕ್ಷಣಾ ಕಾಯ್ದೆ, 1986ರಡಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.