ಹಾವೇರಿ: ರಾಜ್ಯದ ಗಂಗಾಮತವನ್ನು ಶೀಘ್ರವೇ ಎಸ್ಟಿಗೆ ಸೇರಿಸಲಾಗುವುದೆಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.
ಹೌದು, ಹಾವೇರಿಯ ನರಸೀಪುರದ ಅಂಬಿಗರ ಚೌಡಯ್ಯ ಶರಣ ಸಂಸ್ಕೃತಿ ಉತ್ಸವದಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ಈ ಕುರಿತ ಪ್ರಸ್ತಾವನೆ ಈಗಾಗಲೇ ಕೇಂದ್ರ ಸರ್ಕಾರಕ್ಕೆ ತಲುಪಿದ್ದು, ಅಂತಿಮ ಹಂತದಲ್ಲಿದೆ. ಈ ಕುರಿತು ಸಂಬಂಧಪಟ್ಟ ಸಚಿವರೊಂದಿಗೆ ಮತ್ತೊಮ್ಮೆ ಮಾತುಕತೆ ನಡೆಸುತ್ತೇನೆ ಎಂದು ಹೇಳಿದ್ದಾರೆ.
ಇನ್ನು, ಗಂಗಾಮತ ಪೀಠಕ್ಕೆ 10 ಕೋಟಿ ರೂ ನೀಡುವುದಾಗಿ ಯಡಿಯೂರಪ್ಪ ಘೋಷಿಸಿದ್ದರು. ಈಗಾಗಲೇ 5 ಕೋಟಿ ರೂ ಬಿಡುಗಡೆ ಮಾಡಿದ್ದೇವೆ ಎಂದು ಹೇಳಿದರು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ