ಫೆಬ್ರುವರಿ 1 ರಂದು ಮಂಡಿಸಲಿರುವ ಕೇಂದ್ರ ಬಜೆಟ್ನಲ್ಲಿ ರೈತರಿಗೆ ಭರ್ಜರಿ ಸಿಹಿಸುದ್ದಿ ಸಿಗಲಿದೆ ಎನ್ನಲಾಗಿದ್ದು, ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ನೀಡುತ್ತಿರುವ ನೆರವನ್ನು ಹೆಚ್ಚಿಸಲು ಕೇಂದ್ರ ಉದ್ದೇಶಿಸಿದೆ ಎಂದು ಹೇಳಲಾಗಿದೆ.
ಹೌದು, ಪಿಎಂ ಕಿಸಾನ್ ಯೋಜನೆಯಡಿ ರೈತರಿಗೆ ಪ್ರಸ್ತುತ ವರ್ಷಕ್ಕೆ ಮೂರು ಬಾರಿ ರೂ.2 ಸಾವಿರದಂತೆ ರೂ.6 ಸಾವಿರ ನೀಡಲಾಗುತ್ತಿದ್ದು, ಈ ಮೊತ್ತವನ್ನು 8 ಸಾವಿರಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದ್ದು, 4 ಕಂತುಗಳಲ್ಲಿ ಪಾವತಿಸಲು ಯೋಜನೆ ರೂಪಿಸಲಾಗಿದೆ ಎಂದು ವರದಿಯಾಗಿದೆ. ಫೆಬ್ರುವರಿ 1 ರಂದು ಮಂಡಿಸಲಿರುವ ಕೇಂದ್ರ ಬಜೆಟ್ನಲ್ಲಿ ಈ ಬಗ್ಗೆ ಘೋಷಣೆ ಹೊರಬೀಳಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.