ವಿಜಯನಗರ: ಮುಂಬರುವ ವಿಧಾನಸಭಾ ಚುನಾವಣೆ ಅಂಗವಾಗಿ ಕಾಂಗ್ರೆಸ್ ಕೈಗೊಂಡಿರುವ ‘ಪ್ರಜಾಧ್ವನಿ’ ರಥಯಾತ್ರೆ ಇಂದಿನಿಂದ(ಜ.17) ಮತ್ತೆ ಪುನರಾರಂಭಗೊಳ್ಳಲಿದ್ದು, ಇದಕ್ಕಾಗಿ ಕೊಪ್ಪಳ ಮತ್ತು ಹೊಸಪೇಟೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗುತ್ತಿದೆ.
ಹೌದು, ಮುಂಜಾನೆ 11ಕ್ಕೆ ಹೊಸಪೇಟೆಯ ಜಿಲ್ಲಾ ಕ್ರೀಡಾಂಗಣ ಹಾಗೂ ಸಂಜೆ 4ಕ್ಕೆ ಕೊಪ್ಪಳದಲ್ಲಿ ಬೃಹತ್ ಸಮಾವೇಶ ನಡೆಯಲಿದೆ. ಜನವರಿ11ರಂದು ಬೆಳಗಾವಿಯಿಂದ ಆರಂಭವಾಗಿ ಈ ಬಸ್ ಯಾತ್ರೆ ಸಂಕ್ರಾಂತಿ ಕಾರಣಕ್ಕೆ ಐದು ದಿನಗಳ ಕಾಲ ಮುಂದೂಡಿಕೆ ಮಾಡಲಾಗಿತ್ತು.
ಈಗ ಜನವರಿ 27ರವರೆಗೆ ವಿವಿಧ ಜಿಲ್ಲೆಗಳಲ್ಲಿ ಸಂಚಾರ ಆರಂಭವಾಗಲಿದ್ದು, ಡಿಕೆಶಿ ಮತ್ತು ಸಿದ್ದರಾಮಯ್ಯ ಈ ‘ಪ್ರಜಾಧ್ವನಿ’ ಯಾತ್ರೆಯ ನೇತೃತ್ವ ವಹಿಸಿಕೊಳ್ಳಲಿದ್ದು, ಸ್ಥಳೀಯ ಮುಖಂಡರಾದ ಎಚ್.ಆರ್.ಗವಿಯಪ್ಪ, ರಾಜಶೇಖರ್ ಹಿಟ್ನಾಳ್ ಮತ್ತು ಸಿರಾಜ್ ಶೇಖ್ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ