ಹೊಸಪೇಟೆ (ವಿಜಯನಗರ): ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರು ‘ಯಾವ ಪಕ್ಷದಿಂದ ಗೆದ್ದಿದ್ದಾರೆ ಅದರ ಬೆನ್ನಿಗೆ ಚೂರಿ ಹಾಕಿದ್ದು, ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದಾರೆ’ ಎಂದು ಸಚಿವ ಆನಂದ್ ಸಿಂಗ್ ವಿರುದ್ಧ ಕಿಡಿಕಾರಿದ್ದಾರೆ.
ಹೌದು, ಇಂದು ಹೊಸಪೇಟೆಯಲ್ಲಿ ನಡೆದ ಪ್ರಜಾ ಧ್ವನಿ ಯಾತ್ರೆಯ ಸಮಾವೇಶದಲ್ಲಿ ಮಾತನಾಡಿದ ಈಶ್ವರ ಖಂಡ್ರೆ ಅವರು, ರಾಜ್ಯದಲ್ಲಿ ಬಿಜೆಪಿ ಪಕ್ಷವು ಆಪರೇಷನ್ ಕಮಲದ ಮೂಲಕ ಶಾಸಕರನ್ನು ಖರೀದಿಸಿ ರಾಜ್ಯದಲ್ಲಿ ಸರ್ಕಾರ ಮಾಡಿದ್ದು, ನಿಮ್ಮ ಕ್ಷೇತ್ರದ ಶಾಸಕರೇ ಮಾರಾಟ ಆಗಿದ್ದು, ಇವರನ್ನು ಮನೆಗೆ ಕಳಿಸಬೇಕಲ್ಲವೇ? ಎಂದು ಸಚಿವ ಆನಂದ್ ಸಿಂಗ್ ಹೆಸರು ಹೇಳದೆ ಪ್ರಶ್ನಿಸಿದರು.
ಇನ್ನು, ಬಿಜೆಪಿ ಸರ್ಕಾರ ಬಂದ ನಂತರ ರಾಜ್ಯದಲ್ಲಿ ಪ್ರತಿಯೊಂದರಲ್ಲೂ ಹಗರಣಗಳು ನಡೆದಿದ್ದು, ಜಾತಿ, ಧರ್ಮದ ಹೆಸರಲ್ಲಿ ಜನರನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಕಾಂಗ್ರೆಸ್ ವಿರುದ್ಧ ಸತತ ಅಪಪ್ರಚಾರ ಮಾಡುತ್ತಿದ್ದು, ಈ ಸಲದ ಚುನಾವಣೆಯಲ್ಲಿ ಅವರು ಸೋಲುವುದು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.