ಚುನಾವಣೆಗೆ ಕಾಂಗ್ರೆಸ್ ಈಗಾಗಲೇ ಎರಡು ಮಹತ್ವದ ಭರವಸೆಗಳನ್ನು ನೀಡಿದ್ದು, ಈಗ ಬಾಗಲಕೋಟೆಯ ಪ್ರಜಾಧ್ವನಿ ಬಸ್ ಯಾತ್ರೆಯಲ್ಲಿ ಮೂರನೇ ಭರವಸೆಯನ್ನು ನೀಡಲಾಗಿದೆ.
ಹೌದು, ಬಡತನ ರೇಖೆಗಿಂತ ಕೆಳಗಿರುವ ಎಲ್ಲಾ ಕುಟುಂಬಗಳಿಗೆ ಉಚಿತವಾಗಿ 10 ಕೆಜಿ ಅಕ್ಕಿಯನ್ನು ನೀಡಲಾಗುತ್ತದೆ ಎಂದು ಕಾಂಗ್ರೆಸ್ ಹೇಳಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಈ ಭರವಸೆಯನ್ನು ಘೋಷಿಸಿದ್ದು, ಜೊತೆಗೆ ಎಪಿಎಂಸಿ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸುವ ಭರವಸೆ ನೀಡಿದ್ದಾರೆ.
ಇನ್ನು, ಕಾಂಗ್ರೆಸ್ ಈಗಾಗಲೇ ಪ್ರತಿ ಕುಟುಂಬಕ್ಕೂ 200 ಯುನಿಟ್ ವಿದ್ಯುತ್ ಮತ್ತು ಗೃಹಲಕ್ಷ್ಮಿ ಯೋಜನೆಯಲ್ಲಿ ಮಹಿಳೆಯರಿಗೆ 2000ರೂಗಳನ್ನು ಎಂದು ಘೋಷಿಸಿದೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ