ರಾಜ್ಯದ ಆರೋಗ್ಯ ಯೋಜನೆಯಾದ ಯಶಸ್ವಿನಿ ಯೋಜನೆಗೆ ಅರ್ಜಿ ಸಲ್ಲಿಸಲು ಮಾರ್ಚ್ 30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದ್ದಾರೆ.
ಹೌದು, ರೈತರು ಮತ್ತು ಸಹಕಾರಿ ಸಂಘಗಳ ಸದಸ್ಯರಿಗೆ ಹಾಗೂ ಇತರರಿಗೆ ಆರೋಗ್ಯ ಸೌಲಭ್ಯಗಳನ್ನು ನೀಡುವ ಉದ್ದೇಶದಿಂದ ಈ ಯೋಜನೆ ಸ್ಥಾಪನೆ ಮಾಡಲಾಗಿದೆ. ಈಗಾಗಲೇ 33 ಲಕ್ಷ ಮಂದಿ ನೋಂದಾಯಿಸಿಕೊಂಡಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. 5744 ಸಹಕಾರ ಸಂಘಗಳನ್ನು ಒಂದೇ ಅಪ್ಲಿಕೇಷನ್‌ನಡಿ ತಂದು ಸುಲಭ ಚಿಕಿತ್ಸೆಗೆ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಹೇಳಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ