ದೇಶದಲ್ಲಿಯೇ ಪ್ರಥಮ ಬಾರಿಗೆ ರೈತರಿಗೆ ಉಚಿತ ಡಿಸೈಲ್, ಇಂಧನ ವಿತರಿಸುವ ರೈತ ಶಕ್ತಿ ಯೋಜನೆಗೆ ಜನವರಿ 31ರಂದು ಸಿಎಂ ಬಸವರಾಜ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ರೈತ ಶಕ್ತಿ ಎಂಬ ಹೊಸ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ.
ರೈತ ಶಕ್ತಿ ಯೋಜನೆಯಡಿ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವಲ್ಲಿ ರೈತರಿಗೆ ಕೃಷಿ ಯಂತ್ರೋಪಕರಣಗಳ ಬಳಕೆಯನ್ನು ಪ್ರೋತ್ಸಾಹಿಸಲು ಪ್ರತಿ ಎಕರೆಗೆ 250 ರೂನಂತೆ ಗರಿಷ್ಟ 5 ಎಕರೆಯವರೆಗೆ 1250 ರೂಗಳನ್ನು ಡಿಬಿಟಿ ಮೂಲಕ ಡೀಸೆಲ್ ಸಬ್ಸಿಡಿ ನೀಡುವ ಯೋಜನೆ ಇದಾಗಿದೆ.