ಜನಪ್ರಿಯ ಹಿನ್ನೆಲೆ ಗಾಯಕಿ ವಾಣಿ ಜಯರಾಮ್ (78) ನಿಧನರಾಗಿದ್ದಾರೆ. ತಮಿಳುನಾಡಿನ ಅಯ್ಯಂಗಾರ್ ಪರಿವಾರದಲ್ಲಿ ವೆಲ್ಲೂರಿನ ಇಡಂಗು ಗ್ರಾಮದಲ್ಲಿ ಜನಸಿದ್ದ ಅವರು, 1974ರಲ್ಲಿ ಪೋಷ್ಸುಮಂಗಲಿ ಚಿತ್ರದ ಮೂಲಕ ಮೊದಲ ಬಾರಿಗೆ ಗಾಯಕಿಯಾಗಿ ಪಾದಾರ್ಪಣೆ ಮಾಡಿದ್ದರು.
ಅಷ್ಟೇ ಅಲ್ಲ, ಗಾಯಕಿ ವಾಣಿ ಜಯರಾಮ್ ಕನ್ನಡ, ತೆಲುಗು, ಹಿಂದಿ, ಮರಾಠಿ, ಮಲಯಾಳಂ, ಬಂಗಾಳಿ, ಒಡಿಯಾ ಸೇರಿದಂತೆ ವಿವಿಧ ಭಾಷೆಗಳಲ್ಲಿ 10,000 ಕ್ಕೂ ಹೆಚ್ಚು ಹಾಡುಗಳನ್ನು ಹಾಡಿ ಅಭಿಮಾನಿಗಳ ಹೃದಯದಲ್ಲಿ ವಿಶೇಷ ಸ್ಥಾನ ಗಳಿಸಿದ್ದಾರೆ.
ಕನ್ನಡದಲ್ಲಿ ‘ಹೋದೆಯಾ ದೂರ ಓ ಜೊತೆಗಾರ, ದಾರಿ ಕಾಣದಾಗಿದೆ ರಾಘವೇಂದ್ರನೆ’ ಮುಂತಾದ 1,000ಕ್ಕಿಂತಲೂ ಹೆಚ್ಚು ಗೀತೆಗಳನ್ನು ಹಾಡಿದ್ದಾರೆ. ಇವರು ಮೂರು ಬಾರಿ ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ