ದಾವಣಗೆರೆ ಜಿಲ್ಲೆಯ ವಿವಿಧ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಲ್ಲಿ ತೆರವಾಗಿರುವ ಸದಸ್ಯ ಸ್ಥಾನಗಳಿಗೆ ಫೆಬ್ರುವರಿ 25ರಂದು ಉಪ ಚುನಾವಣೆ ಬೆಳಿಗ್ಗೆ 7ರಿಂದ ಸಂಜೆ 5 ಗಂಟೆಯವರೆಗೆ ನಡೆಯಲಿದೆ.
ಮೀಸಲಾತಿ ವಿವರ: ನ್ಯಾಮತಿ ತಾಲ್ಲೂಕಿನ ಗುಡ್ಡೇಹಳ್ಳಿ ಗ್ರಾಮ ಪಂಚಾಯಿತಿಯ ಜೀನಹಳ್ಳಿ-1(ಪರಿಶಿಷ್ಟ ಪಂಗಡ ಮಹಿಳೆ), ಜೀನಹಳ್ಳಿ-2, (ಸಾಮಾನ್ಯ ಮಹಿಳೆ). ನಾಮಪತ್ರಗಳನ್ನು ಸಲ್ಲಿಸಲು ಫೆಬ್ರುವರಿ 14 ಕೊನೆಯ ದಿನ. ಪರಿಶೀಲನೆಗೆ ಫೆಬ್ರುವರಿ 15 ಕೊನೆಯ ದಿನವಾಗಿದ್ದು, ನಾಮಪತ್ರಗಳನ್ನು ಹಿಂತೆಗೆದುಕೊಳ್ಳಲು ಫೆಬ್ರುವರಿ17 ಕಡೆಯ ದಿನವಾಗಿದೆ ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ