ಭಾರತ್-ಪ್ರಧಾನಮಂತ್ರಿ ಜನಾರೋಗ್ಯ ಆರೋಗ್ಯ ಕರ್ನಾಟಕ ಯೋಜನೆಯಡಿ ಪ್ರಯೋಜನ ಪಡೆಯಲು ಆಯುಷ್ಮಾನ್ ಕಾರ್ಡ್ ಮಾಡಿಸಿ, ಆಯುಷ್ಮಾನ್ ಕಾರ್ಡ್ ಗಳನ್ನು ಹತ್ತಿರದ ಗ್ರಾಮ ಒನ್ ನಿಂದ ರೇಷನ್ ಕಾರ್ಡ್ ಲಿಂಕ್ ಆಗಿರುವ ಆಧಾರ್ ಕಾರ್ಡ್ ನೀಡಿ ಉಚಿತವಾಗಿ ಪಡೆಯಲು ಕೋರಲಾಗಿದೆ.
ಆಯುಷ್ಮಾನ್ ಕಾರ್ಡ್ ಹೊಂದಿರುವ ಬಿಪಿಎಲ್ ಫಲಾನುಭವಿಗಳಿಗೆ ವರ್ಷಕ್ಕೆ 5 ಲಕ್ಷ ರೂ ವರೆಗೂ ಎಪಿಎಲ್ ಫಲಾನುಭವಿಗಳಿಗೆ 1.50 ಲಕ್ಷ ದವರೆಗೂ ಸಹ ಪಾವತಿ ಆಧಾರದಲ್ಲಿ ಚಿಕಿತ್ಸಾ ವೆಚ್ಚವನ್ನು ಸರ್ಕಾರ ಸಂಸ್ಥೆಗೆ ಭರಿಸಲಿದೆ.
ಉಚಿತವಾಗಿ ನೀಡುವ ಈ ಕಾರ್ಡ್ ಇದ್ದರೆ, ನಿಮ್ಮ ಖಾತೆಯಲ್ಲಿ 5 ಲಕ್ಷ ಇದ್ದಂತೆ!
ಕಡಿಮೆ ಆದಾಯದ ವರ್ಗಗಳಿಗೆ ಆರೋಗ್ಯ ವಿಮೆ ಒದಗಿಸಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ‘ಆಯುಷ್ಮಾನ್ ಭಾರತ್’ ಯೋಜನೆಗೆ ಇನ್ನೂ ಅನೇಕ ಜನರು ಸೇರ್ಪಡೆಯಾಗಿಲ್ಲ. ಈ ಯೋಜನೆಯಲ್ಲಿ ಸರ್ಕಾರಿ & ಖಾಸಗಿ ಆಸ್ಪತ್ರೆಗಳಲ್ಲಿ ಕುಟುಂಬಕ್ಕೆ ವರ್ಷಕ್ಕೆ ₹5 ಲಕ್ಷದವರೆಗಿನ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ.
ಹೀಗಾಗಿ, ಗ್ರಾಮ ಒನ್, ಸಾರ್ವಜನಿಕ ಸೇವಾ ಕೇಂದ್ರಕ್ಕೆ ತೆರಳಿ ವಿವರ ಹಾಗೂ ಅಗತ್ಯ ದಾಖಲೆಗಳನ್ನು ನೀಡಿ ಅರ್ಜಿ ಸಲ್ಲಿಸಿ. ಇದು ಸಂಪೂರ್ಣ ಉಚಿತ.