ಹರಪನಹಳ್ಳಿ : ಫೆಬ್ರವರಿ 20ರಂದು ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿಯ ಸುತ್ತೋಲೆಯನ್ವಯ ಹಾಗೂ ಘನ ಕರ್ನಾಟಕ ಸರ್ಕಾರದ ಆದೇಶದನ್ವಯ ಮದ್ಯಾಹ್ನ 3 ಗಂಟೆಗೆ ಹರಪನಹಳ್ಳಿ ಉಪ- ವಿಭಾಗ ಕಛೇರಿಯಲ್ಲಿ ಗ್ರಾಹಕರ ಸಂವಾದ ಸಭೆಯನ್ನು ಏರ್ಪಡಿಸಲಾಗಿದೆ.
ಈ ಸಭೆಗೆ ಉಪ-ವಿಭಾಗ ವ್ಯಾಪ್ತಿಯ ಎಲ್ಲಾ ಗ್ರಾಹಕರು ಹಾಜರಾಗಿ ನಮ್ಮ ಇಲಾಖೆಗೆ ಸಂಬಂಧಿಸಿದ ಕುಂದುಕೊರತೆಗಳನ್ನು ಸಭೆಯಲ್ಲಿ ಚರ್ಚಿಸಿ ಪರಿಹಾರ ಕಂಡುಕೊಳ್ಳಲು ಬೆಸ್ಕಾಂ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.