* ಕನಿಷ್ಠ ಬೆಂಬಲ ಬೆಲೆ ಯೋಜನೆ ಅಡಿ ಭತ್ತ, ರಾಗಿ, ಜೋಳ, ಹೆಸರುಕಾಳು & ತೊಗರಿ ಮುಂತಾದ ಆಹಾರ ಧಾನ್ಯಗಳ ಖರೀದಿಗೆ 6650 ಕೋಟಿ.
* ಬೆಳೆಗಳ ಸಂರಕ್ಷಣೆ ಶೇಖರಣೆಗಾಗಿ 10.45 ಲಕ್ಷ ಫಲಾನುಭವಿಗಳಿಗೆ 175 ಕೋಟಿ ನೆರವು
* ತೋಟಗಾರಿಕೆ ಹಾಗೂ ರೇಷ್ಮೆ ಕೃಷಿಗೆ ಪ್ರೋತ್ಸಾಹ ನೀಡುವ ಉದ್ದೇಶಕ್ಕೆ 545 ಕೋಟಿ ರೂ ವೆಚ್ಚ
* ಫಸಲ್ ಭೀಮಾ ಯೋಜನೆ ಅಡಿ 86 ಲಕ್ಷ ರೈತರ ಬೆಳೆ ವಿಮೆಗಾಗಿ ರೂ.4,900 ಕೋಟಿ ಪಾವತಿ
ಒಂದು ತೋಟ ಒಂದು ಬೆಳೆ ಯೋಜನೆ:
ತೋಟಗಾರಿಕೆ ಇಲಾಖೆಗೂ ಹೊಸ ಯೋಜನೆಗಳನ್ನು ಸಿಎಂ ಘೋಷಿಸಿದ್ದು, ಇಲಾಖೆಯ ಅಡಿಯಲ್ಲಿ ಬರುವ 12 ತೋಟಗಳಲ್ಲಿ ‘ಒಂದು ತೋಟ ಒಂದು ಬೆಳೆ’ ಯೋಜನೆಯಡಿ ತೋಟಗಾರಿಕೆ ಉತ್ಪಾದಕತೆಯನ್ನು ಹೆಚ್ಚಿಸಲು 10 ಕೋಟಿ ರೂ. ಗಳ ಒಂದು ಬಾರಿಯ ವಿಶೇಷ ಅನುದಾನ ನೀಡಲಾಗುವುದು.
ಕೃಷಿ ಮತ್ತು ತೋಟಗಾರಿಕಾ ಉತ್ಪನ್ನಗಳ ರಫ್ತು ಮತ್ತು ಸಂಸ್ಕರಣೆಯ ಉತ್ತೇಜನಕ್ಕೆ ರೈತ ಸಂಪದ ಯೋಜನೆಯಡಿ ಮತ್ತೊಂದು ಯೋಜನೆ ಜಾರಿಗೊಳಿಸಲಾಗುತ್ತದೆ ಎಂದು ಸಿಎಂ ಹೇಳಿದ್ದಾರೆ.