ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿಯವರು ತಮ್ಮ 2ನೇ ಬಜೆಟ್ ಅನ್ನು ಮಂಡಿಸುತ್ತಿದ್ದು, ಪ್ರಸ್ತುತ ಸಾಲಿನ ಸರ್ಕಾರಿ ಪ್ರೌಢಶಾಲೆಗಳಲ್ಲಿ ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳ ಸ್ಥಾನದಲ್ಲಿ ಅತಿಥಿ ಶಿಕ್ಷಕರಾಗಿ ಕರ್ತವ್ಯ ನಿರ್ವಹಿಸುತ್ತಿರುವರ ಅತಿಥಿ ಶಿಕ್ಷಕರ ಗೌರವಧನವನ್ನು 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ ಎಂದು ಸಿಎಂ ಘೋಷಣೆ ಮಾಡಿದ್ದಾರೆ.
ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಕನ್ನಡದಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗುವುದು. ರಾಜ್ಯ ಗ್ರಂಥಾಲಯಪಾಲಕರ ಗೌರವಧನ 1 ಸಾವಿರ ರೂ. ಹೆಚ್ಚಳ ಮಾಡಲಾಗಿದೆ. ತೀರ್ಥಹಳ್ಳಿಯ ಕೃಷಿ ಮತ್ತು ತೋಟಗಾರಿಕೆ ಸಂಶೋಧನಾ ಕೇಂದ್ರಕ್ಕೆ 10 ಕೋಟಿ ರೂ ನೆರವು ನೀಡುವ ಕುರಿತು ಸಿಎಂ ಘೋಷಣೆ ಮಾಡಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ