ಶಾಲಾ ಶಿಕ್ಷಣದ ನಂತರ ವಿವಿಧ ಕಾರಣಗಳಿಂದ ವಿಧ್ಯಾಭ್ಯಾಸ ಮುಂದುವರಿಸಲು ಸಾಧ್ಯವಾಗದವರಿಗೆ ಐಐಟಿಯಲ್ಲಿ (IIT) ಮೂರು ತಿಂಗಳ ವೃತ್ತಿಪರ ತರಬೇತಿ ಪಡೆಯಲು ಮೂರು ತಿಂಗಳ ಕಾಲ ಮಾಸಿಕ 1,500 ರೂ ಶಿಷ್ಯವೇತನ (ಬದುಕುವ ದಾರಿ) ನೀಡಲಾಗುವುದು.
ತರಬೇತಿ ಪೂರ್ಣಗೊಂಡವರಿಗೆ ಅಪ್ರೈಂಟಿಸ್ಶಿಪ್ ಕಾರ್ಯಕ್ರಮದಡಿ 3 ತಿಂಗಳು 1,500 ರೂ ನೀಡಲಾಗುವುದು. ಜತೆಗೆ ಪದವಿ ಶಿಕ್ಷಣ ಪೂರೈಸಿ ಉದ್ಯೋಗ ಸಿಗದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಯುವಸ್ನೇಹಿ ಯೋಜನೆ ಅಡಿ 2,000 ರೂ ನೀಡಲಾಗುವುದು. ಈ ಮೂಲಕ ಯುವ ಜನರಿಗೆ ಉನ್ನತ ಶಿಕ್ಷಣ ಹಾಗೂ ನಿರುದ್ಯೋಗದಿಂದ ಉದ್ಯೋಗ ಆಯ್ಕೆ ಕಡೆ ಗಮನಹರಿಸಲು ಸಾಧ್ಯವಾಗುತ್ತದೆ.