ಈ ಮಹಾ ಶಿವರಾತ್ರಿ ಹಬ್ಬವನ್ನು ಮಾಘ ಮಾಸ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುತ್ತದೆ. ಶಿವ ಭಕ್ತರ ಪಾಲಿಗೆ ಮಂಗಳಕರ ರಾತ್ರಿ. ಹಗಲು ಉಪವಾಸವಿದ್ದು, ರಾತ್ರಿ ವೇಳೆ ಜಾಗರಣೆ ಮಾಡಿ, ಶಿವಧ್ಯಾನ ಮಾಡಿ ಶಿವನ ಕೃಪೆಗೆ ಪಾತ್ರವಾಗುವ ಶುಭ ದಿನ ಎಂದು ನಂಬಿಕೆ ಇಟ್ಟಿದ್ದಾರೆ.
ಈ ದಿನ ಶಿವನನ್ನು ಭಕ್ತಿಯಿಂದ ಪೂಜಿಸಿದರೆ, ತಾವು ಮಾಡಿದ ಪಾಪಗಳೆಲ್ಲವೂ ಪರಿಹಾರವಾಗಿ, ಮೋಕ್ಷ ಪ್ರಾಪ್ತವಾಗುತ್ತದೆ ಎಂದು ಭಕ್ತರು ಬಲವಾಗಿ ನಂಬಿದ್ದಾರೆ.
ಮಹಾ ಶಿವರಾತ್ರಿ ;ಪೂಜಾ ವಿಧಾನ
ಮಹಾ ಶಿವರಾತ್ರಿಯ ದಿನ ಶಿವನಿಗೆ ಪ್ರೀಯವಾದ ಬಿಲ್ವಾರ್ಚನೆ, ರುದ್ರಾಭಿಷೇಕ, ಶಿವನಾಮ ಧ್ಯಾನಗಳ ಮೂಲಕ ಶಿವನನ್ನು ಆರಾಸಲಾಗುತ್ತದೆ. ಇಡೀ ರಾತ್ರಿ ಶಿವದೇವಾಲಯಗಳಲ್ಲಿ ರುದ್ರಪಠಣದ ಜೊತೆ ಜಾಗರಣೆ ವಿಜೃಂಭಣೆಯಿಂದ ನಡೆಯುತ್ತದೆ.
ಶಿವರಾತ್ರಿಯಂದು ಬೆಳಗ್ಗೆ ಬೇಗನೆ ಏಳುವ ಭಕ್ತರು, ಸ್ವಾನ ಮಾಡಿ, ಶುಚಿರ್ಭೂತರಾಗಿ ಶಿವದೇವಾಲಯಕ್ಕೆ ತೆರಳುತ್ತಾರೆ. ಕೆಲವರು ಕೈಲಾಸಯಂತ್ರ ರಚಿಸಿ, ಮನೆಯಲ್ಲಿಯೇ ಶಿವನಿಗೆ ವಿಶೇಷ ಪೂಜೆ ಮಾಡಿ ಶಿವ ಆರಾಧನೆಯಲ್ಲಿ ಮುಳುಗುತ್ತಾರೆ.