ಮುಂಬರುವ ಶೈಕ್ಷಣಿಕ ವರ್ಷದಿಂದಲೇ ರಾಜ್ಯದ ವಸತಿ ಶಾಲೆಗಳಲ್ಲಿ ಪಿಯು ಶಿಕ್ಷಣ ಆರಂಭಿಸಲು ನಿರ್ಧರಿಸಲಾಗಿದೆ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ಹೌದು ಈ ಕುರಿತು ಮಾತನಾಡಿರುವ ಕೋಟ ಶ್ರೀನಿವಾಸ ಪೂಜಾರಿ ಅವರು, ರಾಜ್ಯದ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ 6ರಿಂದ 10 ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲಾಗುತ್ತಿದ್ದು, ಅದನ್ನು ಪಿಯುಸಿವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ ಎಂದು ಹೇಳಿದ್ದಾರೆ.
ಇನ್ನು, 530 ವಸತಿ ಶಾಲೆಗಳಲ್ಲಿ ಪಿಯುಸಿವರೆಗೆ ಉಚಿತ ಶಿಕ್ಷಣ ನೀಡಲಾಗುವುದು, ಇದರಿಂದ 40 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ ಎಂದು ಸಚಿವರು ಹೇಳಿದ್ದಾರೆ.