ದಾವಣಗೆರೆ: ಜಿಲ್ಲೆಯ ಮಾಯಕೊಂಡ ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ಮಹಿಳಾ ಕಾರ್ಯರ್ತೆಯ ಖಾಸಗಿ ಫೋಟೋಗಳು ವೈರಲ್ ಆಗಿವೆ ಎಂದು ವರದಿಯಾಗಿದೆ.
ಹೌದು, ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಕಿರುತೆರೆ ನಟಿಯೂ ಆಗಿದ್ದು, ದ್ವೇಷದ ರಾಜಕಾರಣಕ್ಕಾಗಿ ಹೀಗೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಚುನಾವಣೆಗೆ ಸ್ಪರ್ಧಿಸಲು ಬಯಸಿದ್ದ ಇವರು ಕ್ಷೇತ್ರದಲ್ಲಿ ಓಡಾಟ ನಡೆಸುತ್ತಿದ್ದರು ಎನ್ನಲಾಗಿತ್ತು.
ಸದ್ಯ, ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಫೋಟೋ ವೈರಲ್ ಮಾಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸಲಾಗಿದೆ ಎಂದು ತಿಳಿದು ಬಂದಿದ್ದು, ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.