ಟಾಲಿವುಡ್‌ನ ಖ್ಯಾತ ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್ ಅವರು ಆಘಾತಕಾರಿ ವಿಚಾರವೊಂದನ್ನು ಹಂಚಿಕೊಂಡಿದ್ದು, ವ್ಯಕ್ತಿಯೋರ್ವ ಕೊಲೆ ಬೆದರಿಕೆ ಹಾಕಿರುವ, ಆಸಿಡ್ ಎರಚುವ ಬೆದರಿಕೆ ಹಾಕಿದ್ದಾನೆ ಎಂದು ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ.
ಹೌದು, ನಿರೂಪಕಿ ಹಾಗೂ ನಟಿ ರಶ್ಮಿ ಗೌತಮ್ ಅವರು ಆಘಾತಕಾರಿ ವಿಚಾರವೊಂದನ್ನು ಹಂಚಿಕೊಂಡಿದ್ದು, ಈ ಹಿಂದೆ ಕೆಲವರು ನನ್ನ ಮದುವೆ ಬಗ್ಗೆ ಕಾಳಜಿ ವಹಿಸುತ್ತಿದ್ದರು. ಆದರೆ, ಈಗ ಕಾರಿನಿಂದ ಗುದ್ದಿ ಕೊಲೆ ಮಾಡುವುದಾಗಿ, ಆಸಿಡ್ ಸುರಿಯುವುದಾಗಿ ಬೆದರಿಕೆ ಹಾಕಿದ್ದಾರೆ. ಏನು ಮಾಡಲಿ..? ದೂರು ನೀಡಲೇ?, ಸುಮ್ಮನಿದ್ದು ಬಿಡಲೇ? ಎಂದು ಪ್ರಶ್ನಿಸಿದ್ದಾರೆ.