ದಾವಣಗೆರೆ: ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಆಧುನಿಕ ಹೈನುಗಾರಿಕೆ ತರಬೇತಿ ಆಯೋಜಿಸಲಾಗಿದೆ.
ಹೌದು, ಆಧುನಿಕ ಹೈನುಗಾರಿಕೆ ತರಬೇತಿ ಪಡೆಯಲು ಇಚ್ಛಿಸುವ ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್ , 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು.
ಇನ್ನು, ಆಧುನಿಕ ಹೈನುಗಾರಿಕೆ ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ ದಾವಣಗೆರೆ ಕಚೇರಿ ದೂ ಸಂ: 08192-233787ಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ