ರಾಜ್ಯ ಬಜೆಟ್‌ನಲ್ಲಿ ಘೋಷಿಸಿದಂತೆ ರೈತರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲು ನೀಡಲು ಎಲ್ಲಾ ಕ್ರಮ ಕೈಗೊಳ್ಳಲಾಗಿದ್ದು, ಏಪ್ರಿಲ್ 1 ರಿಂದ ಈ ಸೌಲಭ್ಯ ಚಾಲ್ತಿಗೆ ಬರಲಿದೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೇಳಿದ್ದಾರೆ.
ಹೌದು, ಈ ಕುರಿತು ಮಾತನಾಡಿರುವ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರು, ಡಿಸಿಸಿ ಬ್ಯಾಂಕ್‌ಗಳ ಮೂಲಕ ಶೂನ್ಯ ಬಡ್ಡಿದರದಲ್ಲಿ ಸಾಲ ವಿತರಣೆಯಾಗಲಿದ್ದು, ರಾಜ್ಯದ 33 ಲಕ್ಷ ರೈತರು ಇದರ ಲಾಭ ಪಡೆಯಲಿದ್ದಾರೆ ಎಂದು ತಿಳಿಸಿದ್ದಾರೆ.
ಇನ್ನು, ಶೂನ್ಯ ಬಡ್ಡಿದರದಲ್ಲಿ ಸಾಲ ಯೋಜನೆಗೆ ಸದ್ಯದಲ್ಲೇ ರಾಜ್ಯಪಾಲರು ಅನುಮತಿ ನೀಡಲಿದ್ದು, ಅದನ್ನು ಹೊಸ ಆರ್ಥಿಕ ವರ್ಷದ ಮೊದಲ ದಿನದಿಂದಲೇ ಜಾರಿಗೊಳಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ವಿಜಯಪ್ರಭ.ಕಾಂ ಫಾಲೋ ಮಾಡಿ
ಕ್ಷಣ ಕ್ಷಣದ ಮಾಹಿತಿಗಾಗಿ Vijayaprabha WhatsApp Group ಫಾಲೋ ಮಾಡಿ ಮಹತ್ವದ ಮಾಹಿತಿಗಾಗಿ Vijayaprabha Facebook Page ಫಾಲೋ ಮಾಡಿ ವೈವಿಧ್ಯಮಯ ಸುದ್ದಿಗಳಿಗಾಗಿ Vijayaprabha Twitter ಪೇಜ್ ಫಾಲೋ ಮಾಡಿ