ರಾಜ್ಯದಲ್ಲಿ H3N2 ವೈರಸ್ ಭೀತಿ ಹಿನ್ನಲೆ, H3N2 ವೈರಸ್ ಹರಡುವಿಕೆ ಬಗ್ಗೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದೆ.
ಹೌದು, H3N2 ವೈರಸ್ ಹರಡುವಿಕೆ ಬಗ್ಗೆ ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ ಹೊರಡಿಸಿದ್ದು, ರಾಜ್ಯದ ಎಲ್ಲಾ ಆರೋಗ್ಯ ಸಿಬ್ಬಂದಿಗಳು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕಿದೆ. ಮಕ್ಕಳು ಹಾಗೂ ಗರ್ಭಿಣಿಯರು ವಿಶೇಷ ಮುಂಜಾಗೃತಾ ಕ್ರಮವನ್ನ ತೆಗೆದುಕೊಳ್ಳಬೇಕು. ಈ ಸೋಂಕಿನ ಬಗ್ಗೆ ರಾಜ್ಯದ ಜನರು ಯಾವುದೇ ಗಾಬರಿ ಪಡುವ ಅಗತ್ಯವಿಲ್ಲ. ಆದರೆ ಮಾಸ್ಕ್ ಸಹಿತ ಮುಂಜಾಗೃತಾ ಕ್ರಮಗಳನ್ನು ಇಂದಿನಿಂದಲೇ ಪಾಲಿಸಬೇಕು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.