ದಾವಣಗೆರೆ ಜಿಲ್ಲೆಯ ಚನ್ನಗಿರಿ ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಬಂಧನದ ಭೀತಿ ಎದುರಾಗಿದ್ದು, ಪುತ್ರ ಪ್ರಕಾಶ್ ಮಾಡಾಳ್ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆ ಬಿದ್ದಿದ್ದು, ಈ ಪ್ರಕರಣದಲ್ಲಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಎ1 ಆರೋಪಿಯಾಗಿದ್ದಾರೆ. ಹಾಗಾಗಿ ವಿರೂಪಾಕ್ಷಪ್ಪ ನಾಪತ್ತೆಯಾಗಿದ್ದು, ಅವರ ಪತ್ತೆಗೆ ಲೋಕಾಯುಕ್ತ 3 ವಿಶೇಷ ತಂಡ ರಚಿಸಿದೆ.
ಮಾಡಾಳ್ ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ:
ಇನ್ನು, ಶಾಸಕ ಮಾಡಾಳ್ ವಿರೂಪಾಕ್ಷಪ್ಪಗೆ ಲೋಕಾಯುಕ್ತ ಪೊಲೀಸರು ಲುಕ್‌ಔಟ್ ನೋಟಿಸ್ ಜಾರಿ ಮಾಡಲು ನಿರ್ಧರಿಸಿದ್ದಾರೆ. ಈ ನಡುವೆ ಅವರು ವಿದೇಶಕ್ಕೆ ಪರಾರಿಯಾಗಲು ಸಿದ್ಧತೆ ನಡೆಸಿದ್ದು, ಈ ಹಿನ್ನೆಲೆ ಎಲ್ಲಾ ವಿಮಾನ ನಿಲ್ದಾಣಗಳಿಗೆ ಮಾಹಿತಿ ರವಾನಿಸಲು ತೀರ್ಮಾನಿಸಲಾಗಿದೆ.
ಲುಕ್‌ಔಟ್ ನೋಟಿಸ್ ಜಾರಿ ಆದರೆ ಆರೋಪಿ ನ್ಯಾಯಾಲಯ/ಪೊಲೀಸರ ಪೂರ್ವಾನುಮತಿ ಇಲ್ಲದೆ ದೇಶ ತೊರೆಯುವಂತಿಲ್ಲ. ಶಾಸಕ ವಿರೂಪಾಕ್ಷಪ್ಪರ ಮತ್ತೊಬ್ಬ ಪುತ್ರ ಮಲ್ಲಿಕಾರ್ಜುನ್ ಗೆ ಇಂದು ವಿಚಾರಣೆಗೆ ಹಾಜರಾಗುವಂತೆ ತಿಳಿಸಿ ನೋಟಿಸ್ ಜಾರಿ ಮಾಡಲಾಗಿದೆ.