ಮಹಿಳಾ ದಿನಾಚರಣೆಯ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ದಿಢೀರ್ ಆದೇಶ ಹೊರಡಿಸಿದ್ದು, ಪ್ರವಾಸೋದ್ಯಮ ಇಲಾಖೆ ಇಂದು ಮಹಿಳೆಯರಿಗೆ ತನ್ನ ಪ್ಯಾಕೇಜ್‌ನಲ್ಲಿ 50% ರಿಯಾಯಿತಿ ಘೋಷಿಸಿದೆ.
ಅಷ್ಟೇ ಅಲ್ಲ, ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಿನ್ನೆಲೆಯಲ್ಲಿ ಇಂದು ಬಿಎಂಟಿಸಿಯ ಎಲ್ಲಾ ಬಸ್ಸುಗಳಲ್ಲಿ ಮಹಿಳೆಯರಿಗೆ ಉಚಿತವಾಗಿ ಪ್ರಯಾಣಿಸೋದಕ್ಕೆ ಅವಕಾಶ ಮಾಡಿಕೊಡಲಾಗಿದೆ.
ಈ ಸಂಬಂಧ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಮಂಗಳವಾರ ಮಧ್ಯರಾತ್ರಿಯಿಂದ ಇಂದು ಮಧ್ಯರಾತ್ರಿಯವರೆಗೆ ವೋಲ್ಪೋ ಸಹಿತ ಎಲ್ಲಾ ಬಿಎಂಟಿಸಿ ಬಸ್ ನಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಬಹುದಾಗಿದೆ. ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಬಿಎಂಟಿಸಿ ತಿಳಿಸಿದೆ.