ಗ್ಯಾಸ್ ಬೆಲೆ ಏರಿಕೆಯಿಂದ ಸಂಕಷ್ಟದಲ್ಲಿರುವ ಜನ ಸಾಮಾನ್ಯರಿಗೆ ಪುದುಚೇರಿ(ಕೇಂದ್ರಾಡಳಿತ ಪ್ರದೇಶ) ಸರ್ಕಾರ ಬಂಪರ್ ಗಿಫ್ಟ್ ನೀಡಿದ್ದು, ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಮೇಲೆ ರೂ.300 ವರೆಗೆ ಸಬ್ಸಿಡಿ ನೀಡುವುದಾಗಿ ಘೋಷಿಸಿದೆ.
ಪುದುಚೇರಿ ಸಿಎಂ ಏನ್ ರಂಗಸ್ವಾಮಿ ಅವರು 2023-24ನೇ ಹಣಕಾಸು ವರ್ಷಕ್ಕೆ ಮಂಡಿಸಿದ ಬಜೆಟ್ನಲ್ಲಿ ಇದನ್ನು ಬಹಿರಂಗಪಡಿಸಿದ್ದಾರೆ. ಪಡಿತರ ಚೀಟಿ ಹೊಂದಿರುವ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಒಂದು ಸಿಲಿಂಡರ್ ಮೇಲೆ ರೂ.300 ಸಬ್ಸಿಡಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಎಲ್ಲ ಕುಟುಂಬಗಳಿಗೆ ಪ್ರತಿ ತಿಂಗಳು ₹300 ಎಲ್ಪಿಜಿ ಸಬ್ಸಿಡಿ ಘೋಷಣೆ ಮಾಡಿದ್ದು, ಇದಕ್ಕಾಗಿ ₹126 ಕೋಟಿ ಮೀಸಲಿರಿಸಿದೆ. ₹11,600 ಕೋಟಿ ತೆರಿಗೆ ಮುಕ್ತ ಬಜೆಟ್ ಮಂಡಿಸಿದ ರಂಗಸಾಮಿ, ಯುವಕರಿಗೆ ಉದ್ಯೋಗ ಕಲ್ಪಿಸಲು ₹100 ಕೋಟಿ ಹೂಡಿಕೆಯೊಂದಿಗೆ ಕೈಗಾರಿಕೆ ಆರಂಭಿಸುವ ಉದ್ಯಮಗಳಿಗೆ ಶೇ 1ರಷ್ಟು ಸಹಾಯಧನ ನೀಡಲು ನಿರ್ಧರಿಸಿದ್ದಾರೆ.